You are hereಬೆಲ್ಚಿಯ ಹಾಡು
ಬೆಲ್ಚಿಯ ಹಾಡು
ದೊಡ್ಡಗೌಡರ ಬಾಗಿಲೀಗೆ
ನಮ್ಮ ಮೂಳೆಯ ತ್ವಾರಣ
ನಮ್ಮ ಜನಗಳ ಕಾಲು ಕಯ್ಯಿ
ಕಂಬ ಅವರ ಹಟ್ಟಿಗೆ
ಅವರ ಬೇಟೆಗೆ ನಾವು ಮೊಲಗಳು
ನಮ್ಮ ಬಾಳೇ ಬಂಗಲೆ
ಅವರ ಬಂಗಲೆಯಂಗಳಕ್ಕೆ
ನಮ್ಮ ರಕ್ತದ ರಂಗಾಲೆ
ಅವರ ತೋಟದ ತೆಂಗಿನಲ್ಲಿ
ನಮ್ಮ ರಕ್ತದ ಎಳೆನೀರು
ಅವರ ಅಮಲಿನ ಗುಂಗಿನಲ್ಲಿ
ಕೂಲಿ ಹೆಣ್ಣಿನ ಕಣ್ಣೀರು
ಯಾವ ಪಾಪವ ಮಾಡಲಿಲ್ಲ
ಯಾರ ತಲೆಯನು ಹೊಡೆಯಲಿಲ್ಲ
ಕರಗಿನಮ್ಮಯ ಬಾಳ ಕತ್ತಲು
ಕಾಣಾಲಾರವೆ ಹಗಲನು
-
ಕವಿ - ಡಾ. ಸಿದ್ಧಲಿಂಗಯ್ಯ
ಹಕ್ಕುಗಳು: ಲೇಖಕರದು
- Login or register to post comments
- Email this page